ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭೆ ಟಿಕೇಟ್ ಗಾಗಿ ಮಾಜಿ‌ ಸಚಿವ‌ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಟಿಕೇಟ್ ಹಂಚಿಕೆ ಕಗ್ಗಂಟಾಗಿತ್ತು. ಬಿಜೆಪಿ ಸಂಸದೀಯ ಮಂಡಳಿ ಅಳೆದು ತೂಗಿ ಭಾನುವಾರ ದೆಹಲಿಯಲ್ಲಿ‌ ನಡೆದ ಬಿಜೆಪಿ‌ ಸಂಸದೀಯ ಮಂಡಳಿ ಸಭೆಯಲ್ಲಿ ಡಾ.ಸುಧಾಕರ್ ಅವರಿಗೆ ಟಿಕೇಟ್ ಘೋಷಣೆ ಮಾಡಿದೆ.

Breaking news ತಾಲ್ಲೂಕು ಸುದ್ದಿ ದೇಶ ನಮ್ಮ ಚಿಕ್ಕಬಳ್ಳಾಪುರ ರಾಜಕೀಯ ರಾಜ್ಯ ಸುದ್ದಿ