ರಂಗೋಲಿ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ಚಿಕ್ಕಬಳ್ಳಾಪುರ:ಮಾರ್ಚ್29:ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು.ಮತ ಚಲಾಯಿಸುವುದು ನಮ್ಮ ಹಕ್ಕು, ತಪ್ಪದೆ ಎಲ್ಲರೂ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ. ಎನ್ ಭಾಸ್ಕರ್ ಅವರು ತಿಳಿಸಿದರು. ಜಿಲ್ಲಾಡಳಿತ ಮತ್ತು ಚಿಕ್ಕಬಳ್ಳಾಪುರ ತಾಲೂಕು ಆಡಳಿತದ ಸ್ವೀಪ್ ಸಮಿತಿ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನದ ಜಾಗೃತಿ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ,ಅಂಗನವಾಡಿ ,ಆಶಾ ಕರ್ತೆಯರು ರಂಗೋಲಿಯನ್ನು ಆಕರ್ಷಣೀಯವಾಗಿ ಬಿಡಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ಯತ್ನಿಸಿರುವುದು ಶ್ಲಾಘನೀಯ ಎಂದರು.

ನಮ್ಮ ಚಿಕ್ಕಬಳ್ಳಾಪುರ