ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಗಾಳಿ

ಬಿಸಿಲಿನ ತಾಪಮಾನ ಹೆಚ್ಚಾಗಿ ಎಲ್ಲೆಡೆ ಬಿಸಿಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ಪೂರ್ವ ಭಾಗ ಹಾಗು ದಕ್ಷಿಣ ಭಾಗದಲ್ಲಿ ಇನ್ನು ೫ ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಿಸಿಲಿನ ಧಗೆ ಹೆಚ್ಚಾಗಿದ್ದು, ಬಯಲು ಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಂತರ ಜಿಲ್ಲೆಗಳಲ್ಲಿ ೩೮ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಮಳೆ ಬೀಳದಿರುವ ಕಾರಣ ವಾತಾವರಣದಲ್ಲಿ ಬಿಸಿ ಗಾಳಿ ಬೀಸುತ್ತಿದೆ. ರಾಜ್ಯದಲ್ಲಿ ಮುಂದಿನ ೫ ದಿನಗಳ ಕಾಲ ಜೋರು ಬಿಸಿಲು ಇರಲಿದ್ದು, ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದ್ದು, ಮನಿಷ್ಯರಲ್ಲಿ ನಿರ್ಜಲೀಕರಣವಾಗಿ ವ್ಯಕ್ತಿಗಳು ನಿತ್ರಾಣಗೊಳ್ಳುವ ಸಾಧ್ಯತೆ ಇದೆ. ಅಲ್ಲದೆ ತಲೆ ತಿರುಗಿ ಬೀಳುವ ಸಾಧ್ಯತೆ ಇದೆ. ಮದ್ಯಾಹ್ನದ ವೇಳೆ ಮನೆಯಿಂದ ಹೊರ ಬರದೆ ಇರುವುದು ಸತ್ಯವಾಗಿದ್ದು, ವೈದ್ಯರ ಪ್ರಕಾರ ಹೆಚ್ಚು ನೀರು, ದ್ರವರೂಪದ ಆಹಾರ ಸೇವಿಸಲು ಸೂಚಿಸಿದ್ದಾರೆ.

ಆರೋಗ್ಯ ಕೃಷಿ ಕ್ರೀಡೆ ರಾಜ್ಯ ಸುದ್ದಿ