100 ಅಡಿ ಆಳಕ್ಕೆ ಉರುಳಿ ಬಿದ್ದ ಬಸ್: 6 ಜನರಿಗೆ ಗಂಭೀರ ಗಾಯ: 23 ಜನರಿಗೆ ಗಾಯ


ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಸ್ಸೊಂದು ಉರುಳಿ ಬಿದ್ದ ಘಟನೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ನಡೆದಿದೆ.ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ದತ್ತಪೀಠಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಿದ್ದಿದೆ.ಶಿರಾದಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಸ್ ಹೊರಟಿತ್ತು. ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Breaking news ರಾಜ್ಯ ಸುದ್ದಿ