ಪತ್ರಕರ್ತ ಗಣೇಶ್ ನಿಧನ


ಗೌರಿಬಿದನೂರು :ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ವಿ.ಡಿ.ಗಣೇಶ್(54) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಎರಡು ತಿಂಗಳ ಹಿಂದೆ ಶಿವಮೊಗ್ಗಕ್ಕೆ ಶೃಂಗೇರಿ ಶಾರದಾ ಮಂದಿರ ಪ್ರವಾಸಕ್ಕೆ ತೆರಳಿದ್ದಾಗ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ 2:30ರ ಸಮಯದಲ್ಲಿ ನಿಧನ ಹೊಂದಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಗಣೇಶ್, ಕಾರ್ಯನಿರತನಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ ಈಗ ಸದಸ್ಯರಾಗಿ ಕನ್ನಡಪ್ರಭ ಹಾಗೂ ಉದಯವಾಣಿ ವರದಿಗಾರರಾಗಿ ವಿವಿಧ ಕನ್ನಡ ದಿನಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪತ್ನಿ, ಸಹೋದರರು ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ.

ದೇಶ