ಕೊಲೆ ಪ್ರಕರಣದ ಆರೋಪಿಗೆ ಗುಂಡೇಟು

ದೊಡ್ಡಬಳ್ಳಾಪುರ:ಕೊಲೆ ಪ್ರಕರಣದ ಆರೋಪಿಯನ್ನ ಬಂಧಿಸಲು ಹೋದಾಗ ಪೋಲಿಸರ ಮೇಲೆ ಹಲ್ಲೆಗೆ ಮುಂದಾದ ಕೊಲೆ ಆರೋಪಿ ಮೇಲೆ ಪೋಲಿಸರು ಫೈರಿಂಗ್ ನಡೆಸಿದ್ದಾರೆ, ಆರೋಪಿಯ ಕಾಲಿಗೆ ಗುಂಡೇಟು ಬಿದ್ದಿದ್ದು ಆಸ್ಪತ್ರೆ ದಾಖಲು ಮಾಡಲಾಗಿದೆ.ಯಲಹಂಕ ತಾಲ್ಲೂಕಿನ ಶ್ರೀರಾಮನಹಳ್ಳಿ ಸಮೀಪ ಇಂದು ಮುಂಜಾನೆ ಘಟನೆ ನಡೆದಿದ್ದು, ಕೊಲೆ ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿಗಳಿಗೆ ದೊಡ್ಡಬಳ್ಳಾಪುರ ಪೊಲೀಸರು ಈ ಘಟನೆ ಮೂಲಕ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದಾರೆ.ಕಳೆದ 11 ರಂದು ದೊಡ್ಡಬಳ್ಳಾಪುರ ಹೊರವಲಯದ ನವೋದಯದ ಶಾಲೆ ಸಮೀಪ ಹೇಮಂತ್ ಗೌಡ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಆತನ ಸ್ನೇಹಿತರ ಮೇಲೆ ಪ್ರಕರಣ ದಾಖಲಾಗಿತ್ತು. ಘಟನೆ ನಂತರ ಕೊಲೆ ಆರೋಪಿಗಳು ತಲೆಮರೆಸಿಕೊಂಡಿದ್ದರು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬೆನ್ನತ್ತಿದರು, ಈ ವೇಳೆ ಖಚಿತ ಮಾಹಿತಿ ಮೇರೆಗೆ ಕೊಲೆ ಆರೋಪಿ ಶ್ರೀನಿವಾಸ್ ಅಲಿಯಾಸ್ ಚಿಕ್ಕ ಮಿಟ್ಟೆ ಬಂಧಿಸಲು ಹೋದಾಗ, ಪೊಲೀಸ್ ಕಾನ್ಸ್ಟೇಬಲ್ ಚಂದ್ರಶೇಖರ್ ಚಾಕುವಿನಿಂದ ಮೇಲೆ ಹಲ್ಲೆ ಮಾಡಲು ಪ್ರಯತ್ನ ಮಾಡುತ್ತಾನೆ, ಆರೋಪಿಗೆ ಶರಣಾಗುವಂತೆ ಪೊಲೀಸರು ಏರ್ ಫೈರಿಂಗ್ ಮಾಡುವ ಮೂಲಕ ಎಚ್ಚರಿಕೆಯನ್ನ ನೀಡಲಾಗುತ್ತದೆ, ಆದರೂ ಸಹ ಆತ ಹಲ್ಲೆಗೆ ಮುಂದಾಗಿದ್ದಾನೆ ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಆರೋಪಿ ಶ್ರೀನಿವಾಸ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಶ್ರೀನಿವಾಸ್ ಮತ್ತು ಗಾಯಗೊಂಡಿರುವ ಕಾನ್ಟೇಬಲ್ ಚಂದ್ರಶೇಖರ್ ರನ್ನ ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

Breaking news ಕ್ರೈಂ ತಾಲ್ಲೂಕು ಸುದ್ದಿ ದೊಡ್ಡಬಳ್ಳಾಪುರ ರಾಜ್ಯ ಸುದ್ದಿ