ಸಾರಿಗೆ ಬಸ್ ಅಪಘಾತ: ತಪ್ಪಿದ ಅನಾಹುತ


ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಅರ್ ಟಿ ಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.ಸೋಮವಾರಪೇಟೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಅಡಕಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ದಿವೈಡರ್ ಗೆ ಅಪ್ಪಳಿಸಿ ಪಕ್ಕದ ರಸ್ತೆಯ ತಡೆಗೋಡೆ ಮೇಲೆ ನಿಂತಿದೆ. ಒಂದು ವೇಳೆ ಪಕ್ಕದ ರಸ್ತೆ ಇಲ್ಲದಿದ್ದರೆ ಕೆಳಗೆ ಉರುಳಿ ಬಿದ್ದಿದ್ದರೆ ಬಾರಿ ಅನಾಹುತವೇ ಸಂಭವಿಸುತ್ತಿತ್ತು.ಆದರೆ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಅಪಘಾತ ನಡೆದಿದ್ದರಿಂದ ಕಿಲೋಮಿಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಸುದ್ದಿ ತಿಳಿದ ಕೂಡಲೇ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಚಾಲಕ ಸೇರಿದಂತೆ ಆರು ಪ್ರಯಾಣಿಕರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Breaking news